ಮಸ್ಕಿ: ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ
Maski, Raichur | Mar 25, 2024 ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಪ್ರತಿ ಅಧಿಕಾರಿ ಚುನಾವಣೆ ಕರ್ತವ್ಯ ಎಚ್ಚರಿಕೆಯಿಂದ ನಿಭಾಯಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ಹೇಳಿದರು. ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.