ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಬೀಡಗಾನಹಳ್ಳಿಯಲ್ಲಿರುವ ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ - 2025 ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮಕ್ಕೆ ಡಿಆರ್ಡಿಒ ಮುಖ್ಯ ನಿರ್ದೆಶಕರಾದ ಡಾ.ಎನ್.ರಂಜನ್ ವರ್ಚುವಲ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ನಂತರ ಮಾತನಾಡಿದ ನಾಗಾರ್ಜುನ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಸಿಓಓ ಭಾನು ಚೈತನ್ಯ ವರ್ಮಾ, ನಮ್ಮ ದೇಶದ ಯುವಶಕ್ತಿಗೆ ರಾಷ್ಟ್ರಮಟ್ಟದ ಅವಕಾಶ ದೊರೆಯುತ್ತಿರುವುದು ನಿಜಕ್ಕೂ ಶ್ಲಾಘನೀಯ. ಪ್ರತಿಯೊಬ್ಬ ಸ್ಪರ್ಧಾರ್ಥಿಯೂ ತಮ್ಮಲ್ಲಿರುವ ಪ್ರಾಯೋಗಿಕ ಮತ್ತು ತಂತ್ರ