ಚಾಮರಾಜನಗರ ತಾಲೂಕಿನ ಯಡಪುರ ಬಳಿ ಇರುವ ಸಿಮ್ಸ್ ಬೋಧನಾ ಆಸ್ಪತ್ರೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಕ್ಕೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು. ಈ ವೇಳೆ ಕಟ್ಟಡದಲ್ಲಿದ್ದ ವಿಕಲಚೇತನರ ಪರಿಕರಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.