ಕಂಪ್ಲಿ: ನಗರದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ರವರ 4ನೇ ವರ್ಷದ ಪುಣ್ಯಸ್ಮರಣೆ
Kampli, Ballari | Oct 29, 2025 ಅ.29,ಬುಧವಾರ ಬೆಳಿಗ್ಗೆ 11:30ಕ್ಕೆ ಕಂಪ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಹತ್ತಿರ ಇರುವ ಡಾ. ಪುನೀತ್ ರಾಜ್‌ಕುಮಾರ್ ಸರ್ಕಲ್‌ನಲ್ಲಿ ಅಪ್ಪು ಅವರ 4ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಅಭಿಮಾನಿಗಳು ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪನಮನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ ಮತ್ತು ಸಿ.ಎ. ಚನ್ನಪ್ಪ ಅವರು, “ಅಪ್ಪು ರವರ ಆದರ್ಶಗಳು ಎಲ್ಲರಿಗೂ ಮಾದರಿ. ಅವರ ಪಾದಚಿಹ್ನೆ ಅನುಸರಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು,” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೋಟೆ ಬಾಬಾ, ಲಕ್ಷ್ಮಣ, ಸಿ.ಎ. ಚನ್ನಪ್ಪ, ಮಲ್ಲಿಕಾರ್ಜುನ, ರಾಜಶೇಖರ, ಹುಸೇನಪ್ಪ, ಹರೀಶ್ ಸೇರಿದಂತೆ ಅನೇಕ ಅಭಿಮಾನಿಗಳು ಭಾಗವಹಿಸಿದ್ದರು.