ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್ಲೈನ್ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಚೈಲ್ಡ್ ಫಂಡ್ ಇಂಡಿಯಾ ಇವರ ಸಹಯೋಗದಲ್ಲಿ ಮಕ್ಕಳ ಆನ್ ಲೈನ್ ಸುರಕ್ಷತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಾಗಾರವನ್ನು ವಿಕಾಸಸೌಧದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಉದ್ಘಾಟಿಸಿ ಮಾತನಾಡಿದ ಸಚಿವರು, ಇಂದಿನ ಮಕ್ಕಳು ನಮ್ಮ ದೇಶದ ಭವಿಷ್ಯ, ಆದರೆ ಇಂದು ಮಕ್ಕಳ ಬೆಳವಣಿಗೆಗೆ ಮೊಬೈಲ್ ಅಡ್ಡಪರಿಣಾಮ ಬೀರುತ್ತಿದೆ