ಗುಬ್ಬಿ: ಹೇಮಾವತಿ ಕೆನಾಲ್ ವಿರುದ್ಧ ಮತ್ತೆ ಬೃಹತ್ ಹೋರಾಟಕ್ಕೆ ಸಜ್ಜಾದ ರೈತ ಸಂಘ ಪಟ್ಟಣದಲ್ಲಿ ಪೂರ್ವ ಭಾವಿ ಸಭೆ
Gubbi, Tumakuru | Sep 16, 2025 ಪಟ್ಟಣದಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ಮೂಲಕ ರಾಮನಗರ ಭಾಗಕ್ಕೆ ನೀರು ಹರಿಸುವುದಕ್ಕೆ ರೈತ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ. ಯಾವುದೇ ಕಾರಣಕ್ಕೂ ಈ ಭಾಗದಿಂದ ನೀರು ಹರಿಸಲು ಸಾಧ್ಯವಿಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ವೀಕ್ಷಣೆ ಮಾಡಿ ಹೋಗಿರಬಹುದು, ಆದರೆ ಅವರ ಮಾತಿಗೆ ನಾವು ಜಗ್ಗುವುದಿಲ್ಲ. ನಮ್ಮ ಪ್ರಾಣ ಹೋದರೂ ಇಲ್ಲಿಂದ ನೀರು ಬಿಡುವುದಿಲ್ಲ ಎಂದು ರೈತರು ತಿಳಿಸಿದ್ದಾರೆ....