ಧಾರವಾಡದ ನವಲೂರು ಬಳಿಯ ಅಂಬಾರಾಯ ಗಾರ್ಡನ್ ರಸ್ತೆಯ ಬದಿಯಲ್ಲಿ ಕಸದ ರಾಶಿಗಳು ತುಂಬಿ ತುಳುಕುತ್ತಿದ್ದು, ಸ್ವಚ್ಛ, ಸುಂದರ ಪರಿಸರ ಹಾಳಾಗುತ್ತಿದೆ. ಮಹಾನಗರ ಪಾಲಿಕೆ ನಿರ್ಲಕ್ಷ್ಯದಿಂದಾಗಿ ಈ ಪರಿಸ್ಥಿತಿ ಉಂಟಾಗಿದ್ದು, ಕಸದ ದುರ್ವಾಸನೆ ಸುತ್ತಮುತ್ತಲಿನ ನಿವಾಸಿಗಳಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ. ಜನರು ಸ್ವಚ್ಛ ಪರಿಸರವನ್ನು ಹಾಳು ಮಾಡುತ್ತಿರುವುದು ಕಂಡುಬಂದಿದೆ.