ಚಾಮರಾಜನಗರ: ನ್ಯಾಯಾಧೀಶರ ಮೇಲೆ ಶೂ ಎಸೆತ ಖಂಡಿಸಿ ಚಾಮರಾಜನಗರ ಬಂದ್ : ರಸ್ತೆ ತಡೆದು ಪ್ರತಿಭಟನೆ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಗವಾಯಿ ಮೇಲೆ ಶೂ ಎಸೆತ ಘಟನೆ ಖಂಡಿಸಿ ಚಾಮರಾಜನಗರ ಬಂದ್ ಗೆ ವಿವಿಧ ಸಂಘಟನೆಗಳು ಕರೆ ಕೊಟ್ಟಿತ್ತು. ಚಾಮರಾಜನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ದೊಡ್ಡ ಅಂಗಡಿ ಬೀದಿ, ಗುಂಡ್ಲುಪೇಟೆ ವೃತ್ತ, ಭುವನೇಶ್ವರಿ ವೃತ್ತದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ನ್ಯಾಯಾಧೀಶರಿಗೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಗೆ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.