ಗೌರಿಬಿದನೂರು ತಾಲೂಕಿನಿಂದ ಬೇರ್ಪಟ್ಟ ನೂತನ ಮಂಚೇನಹಳ್ಳಿ ತಾಲೂಕು ಕೇಂದ್ರದ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು, ಠಾಣಾ ವ್ಯಾಪ್ತಿಯ ಚಿಕ್ಕ ಹೊಸಹಳ್ಳಿ ಗ್ರಾಮದ ಹೊರ ವಲಯದ ಜಮೀನಿನ ಬಳಿ ಅಕ್ರಮವಾಗಿ ಇಸ್ಪೀಟು ಜೂಜಾಟವಾಡುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಆರೋಪಿಗಳನ್ನು ಬಂಧಿಸಿ, ಜೂಜಾಟಕ್ಕೆ ಪಣ ಇಟ್ಟಿದ್ದ ₹2860ರೂ. ಹಣವನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಲಾಗಿದೆ.