ಮಡಿಕೇರಿ: ರಕ್ತದಾನ ಶಿಬಿರದಲ್ಲಿ 60ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹ
ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 60ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹವಾಗಿದೆ. ಎನ್.ಸಿ.ಸಿ, ಎನ್.ಎಸ್.ಎಸ್, ಯುವ ರೆಡ್ ಕ್ರಾಸ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ನಡೆದ ಶಿಬಿರದಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.