ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬಿ.ಎಸ್.ಎಸ್. ಮೈಕ್ರೋ ಪೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ
ಬುಧವಾರ ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಹರದ ಕ್ರೀಡಾ ಭವನದಲ್ಲಿ ಬಿ.ಎಸ್.ಎಸ್. ಮೈಕ್ರೋ ಪೈನಾನ್ಸ್ ವತಿಯಿಂದ ವಿಧ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಚಿತ್ರದುರ್ಗ ತಹಶಿಲ್ದಾರ್ ಗೋವಿಂದ ರಾಜು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ವಿಧ್ಯಾರ್ಥಿ ವೇತನ ನೀಡುವ ಮೂಲಕ ಬಿ.ಎಸ್.ಎಸ್. ಮೈಕ್ರೋ ಪೈನಾನ್ಸ್ ಸಹಕಾರ ನೀಡುತ್ತಿದೆ ಎಂದು ಶ್ಲಾಘಿಸಿದರು. ಈ ಸಂಧರ್ಭದಲ್ಲಿ ಜಿಲ್ಲೆಯ ವಿವಿಧ ಶಾಲಾ & ಕಾಲೇಜಿನ 244 ಮಂದಿ ವಿಧ್ಯಾರ್ಥಿಗಳಿಗೆ ತಲಾ 2500 ರೂಪಾಯಿಗಳಂತೆ ವಿಧ್ಯಾರ್ಥಿ ವೇತನ ನೀಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಬಿ.ಎಸ್.ಎಸ್. ಮೈಕ್ರೋ ಪೈನಾನ್ಸ್ ಸಿ.ಎಸ್.ಆರ್ ಹೆಡ್ ಪಂಡಿತ್ ಗಂಗಾಧರ್ ಪಾಟೀಲ್ ಸೇರಿ ಹಲವರಿದ್ದರು