ಹಾಸನ: ಅ. 9ರಿಂದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಜಿಲ್ಲಾಡಳಿತದಿಂದ ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ
Hassan, Hassan | Sep 16, 2025 ಹಾಸನ : ನಗರದ ಅಧಿದೇವತೆ ಹಾಸನಾಂಬ ದರ್ಶನೋತ್ಸವ-2025ದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಂದು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ದೇವಾಲಯದ ಆಡಳಿತಾಧಿಕಾರಿ ಮಾರುತಿ ಅವರು ಜಿಲ್ಲಾಡಳಿತದ ಪರವಾಗಿ ಅಧಿಕೃತ ಆಹ್ವಾನ ನೀಡಿದರು.ನಾಡಿನ ಪ್ರಸಿದ್ಧ ಹಾಸನಾಂಬ ಜಾತ್ರಾಮಹೋತ್ಸವವು ಅಕ್ಟೋಬರ್ 9ರಿಂ