ಬೆಂಗಳೂರು ಉತ್ತರ: ಬೆಂಗಳೂರಿಗೂ ಕಾಲಿಟ್ಟ ಮೊಂತಾ ಚೆಂಡು ಮಾರುತ ಜನರಿಗೆ ಕಿರಿಕಿರಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊಂತಾ ಚಂಡಮಾರುತದ ಪರಿಣಾಮ ಕಾಣಿಸಿಕೊಂಡಿದೆ. ನಗರದಲ್ಲಿ ಬೆಳಿಗ್ಗೆಯಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಮೋಡ ಕವಿದ ವಾತಾವರಣವಿದೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಮಧ್ಯ ರೈಲ್ವೆ ಹಲವು ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಿದೆ. ಇಂದು ಕೆಲವು ರೈಲುಗಳು ನಿಗದಿತ ಸಮಯಕ್ಕಿಂತ 12 ಗಂಟೆ ತಡವಾಗಿ ಹೊರಡಲಿವೆ.