ಗಣೇಶೋತ್ಸವ: ಕಟ್ಟುನಿಟ್ಟಿನ ನಿಯಮ ಪಾಲನೆಗೆ ಡಿಜೆ ಮಾಲೀಕರಿಗೆ ಕಲಬುರಗಿ ಪೊಲೀಸ್ ಆಯುಕ್ತರ ಸೂಚನೆ
ಕಲಬುರಗಿ:
ಮುಂಬರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ, ನಗರದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದಲ್ಲಿ ಇಂದು ಡಿಜೆ ಹಾಗೂ ಸೌಂಡ್ ಸಿಸ್ಟಮ್ ಮಾಲೀಕರ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯಲ್ಲಿ ಸೌಂಡ್ ಸಿಸ್ಟಮ್ ಮಾಲೀಕರಿಗೆ ಪೊಲೀಸರು ಈ ಕೆಳಗಿನ ಪ್ರಮುಖ ಸೂಚನೆಗಳನ್ನು ನೀಡಿದರು:
ಸೌಹಾರ್ದತೆ ಕಾಪಾಡುವುದು: ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ಧರ್ಮ ಅಥವಾ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂತಹ ಅಥವಾ ಕೋಮು ಸೌಹಾರ್ದತೆಯನ್ನು ಕೆಡಿಸುವಂತಹ ಹಾಡುಗಳನ್ನು ಯಾವುದೇ ಕಾರಣಕ್ಕೂ ಹಾಕಬಾರದು.
ಡೆಸಿಬಲ್ ಮಿತಿ: ಧ್ವನಿವರ್ಧಕಗಳನ್ನು ಸರ್ಕಾರ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ನಿಗದಿಪಡಿಸಿದ ಡೆಸಿಬಲ್ (Decibel) ಮಿತಿಯೊಳಗಡೆ ಮಾತ್ರ ಬಳಸಬೇಕು.
ಸಮಯದ ಮಿತಿ: ನಿಗದಿಪಡಿಸಿದ ಸಮಯದ ಒಳಗಾಗಿ ಮಾತ್ರ ಸೌಂಡ್ ಸಿಸ್ಟಮ್ಗಳನ್ನು ಬಳಸತಕ್ಕದ್ದು. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಹಬ್ಬವನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ಆಚರಿಸಲು ಸಾರ್ವಜನಿಕರು ಹಾಗೂ ಧ್ವನಿವರ್ಧಕಗಳ ಮಾಲೀಕರು ಪೊಲೀಸ್ ಇಲಾಖೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕಾಗಿ ಕೋರಲಾಗಿದೆ.
Yadgir, Yadgir | Sep 10, 2026