ಮಡಿಕೇರಿ: ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಮೈಸೂರಿನ ದಿಯಾ ಮತ್ತು ವಿಶಾಲ್
ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಮೈಸೂರಿನ ದಿಯಾ ಭೀಮಯ್ಯ ಮತ್ತು ವಿಶಾಲ್ ಉತ್ತಪ್ಪ ಆಯ್ಕೆಯಾಗಿದ್ದಾರೆ. ದಿಯಾ ಭೀಮಯ್ಯ ಜೂನಿಯರ್ ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಮತ್ತು ವಿಶಾಲ್ ಉತ್ತಪ್ಪ 38ನೇ ಸಬ್ ಜೂನಿಯರ್ ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ.