ಬೆಳ್ತಂಗಡಿ: ಉಜಿರೆಯಲ್ಲಿ ತಿಮರೋಡಿ ಮನೆಗೆ ನೋಟಿಸ್ ಅಂಟಿಸಿದ ಬೆಳ್ತಂಗಡಿ ಪೊಲೀಸರು
ಎಸ್ಐಟಿ ಅಧಿಕಾರಿಗಳು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಶೋಧ ನಡೆಸಿದ ವೇಳೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿರುವ ಬಗ್ಗೆ ಸೆ.16ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ನೋಟಿಸ್ ಅಂಟಿಸಿದ್ದಾರೆ.