ರಾಯಚೂರು ನಗರದಲ್ಲಿ ರಾಷ್ಟ್ಟೀಯ ಪಲ್ಸ್ ಪೋಲಿಯೋ ಅಭಿಯಾನದಡಿ ಡಿ.21ರಿಂದ 24ರವರೆಗೆ ಐದು ವರ್ಷದೊಳಗಿನ 35,560 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ಕೆ ನಿಯೋಜನೆಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆಯರು ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಮಂಗಳವಾರ 12 ಗಂಟೆಗೆ ನಡೆದ ಪಲ್ಸ್ ಪೋಲಿಯೋ ನಗರ ಟಾಸ್ಕ್ಪೋರ್ಸ್ ಸಮಿತಿ ಸಭೆಯಲ್ಲಿ ಸೂಚಿಸಿದರು.