ಪಾವಗಡ: ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಮಾಜಿ ಶಾಸಕ ತಿಮ್ಮರಾಯಪ್ಪ ಮನವಿ
ಪಾವಗಡದಲ್ಲಿ ಎದುರಾಗಿರುವ ವಿದ್ಯುತ್ ವ್ಯತ್ಯಯ ಮತ್ತು ಕಡಿಮೆ ವೋಲ್ಟೇಜ್ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಅವರು ವಿದ್ಯುತ್ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.