ಚಿತ್ರದುರ್ಗ: ಮುಖ್ಯಮಂತ್ರಿ ವಿಡಿಯೋ ಸಂವಾದ: ಚಿತ್ರದುರ್ಗ ಡಿಸಿ ಟಿ.ವೆಂಕಟೇಶ್ ಭಾಗಿ
ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಹೆಚ್ಚಿನ ಮಳೆಯಿಂದಾಗಿ ಬೆಳೆ ನಷ್ಟ ಅನುಭವಿಸಿದ ಜಿಲ್ಲೆಯ 769 ರೈತರಿಗೆ ಒಟ್ಟು 109.93 ಲಕ್ಷ ರೂ. ಪರಿಹಾರ ವಿತರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿ ಅನುಭವಿಸಿದ ರೈತರಿಗೆ ಪರಿಹಾರ ವಿತರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ವಿವಿಧ ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯ ಬಳಿಕ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.