ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿ: ಕಾರು ಡಿಕ್ಕಿ ಹೊಡೆದು ಕಾರ್ಮಿಕ ಸಾವು
ಬೆಂಗಳೂರು-ಮೈಸೂರು ಹೆದ್ದಾರಿಯ ಹೆಜ್ಜಾಲ ಬಳಿ ರಸ್ತೆ ದಾಟುತ್ತಿದ್ದ ಹನ್ಸಾ ರಾಜ್ ಎಂಬ ಕಾರ್ಮಿಕನಿಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.