ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿ ಬೇರೆಲ್ಲೂ ಇಲ್ಲ ಹಾಗಾಗಿ ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಕೆ.ಎಸ್.ರಂಗಪ್ಪ ಹೇಳಿದರು. ನಗರದ ವರನಟ ಡಾ. ರಾಜ್ಕುಮಾರ್ ರಂಗಮಂದಿರದಲ್ಲಿ ಅಖಿಲ ಭಾರತ ಕನ್ನಡ ಮಹಾಸಭಾದ ವತಿಯಿಂದ ನಡೆದ ಕರ್ನಾಟಕ ಏಕೀಕರಣ ಅಮೃತ ಮಹೋತ್ಸವದಲ್ಲಿ ಬುಧವಾರ ಅವರು ಮಾತನಾಡಿದರು. ಹರವೆ ವಿರಕ್ತ ಮಠದ ಶ್ರೀ ಸರ್ಪಭೂಷಣಸ್ವಾಮೀಜಿ ಮಾತನಾಡಿ, ಕನ್ನಡ ಸಂಘಟನೆ ಗಳು ಹೋರಾಟದ ಮೂಲಕ ಸರ್ಕಾರ ವನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ, ಕನ್ನಡಪರ ಹೋರಾಟಗಾರರು, ಧ್ವನಿ ಎತ್ತುವವರು ಹೆಚ್ಚಾಗಬೇಕು ಎಂದರು.