ನಗರದಲ್ಲಿ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ. ಸಾಹಿತಿ ಕುಂ. ವೀರಭದ್ರಪ್ಪ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಪ್ರಶಸ್ತಿ ಪ್ರದಾನ ಮಾಡಿದರು. ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ವತಿಯಿಂದ ಭಾನುವಾರ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ನಡೆದ ಹನ್ನೊಂದನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಸಾಧಕರಿಗೆ ರಾಷ್ಟ್ರೀಯ ಯುವ ಪ್ರಶಸ್ತಿ ಹಾಗೂ ರಾಷ್ಟ್ರೀಯ ಪುಸ್ತಕ ಪ್ರಶಸ್ತಿ ಪ್ರದಾನ ಮಾಡಲಾಯಿತು.