ಬೆಂಗಳೂರು ಉತ್ತರ: ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕೋಟಿ ಕೋಟಿ ಆಸ್ತಿ-ಪಾಸ್ತಿ ಪತ್ತೆ
ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ರು.. ಸುಮಾರು ಎಂಟು ಗಂಟೆಗೂ ಅಧಿಕ ತಾಸು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಶೋಧ ನಡೆಸಿದ ನಂತರ ಕೋಟಿ ಕೋಟಿ ರೂಪಾಯಿ ಮೌಲ್ಯದ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಈ ಬಗ್ಗೆ ಮೇ ಎಂಟರಂದು ರಾತ್ರಿ 8ಗಂಟೆ ಸುಮಾರಿಗೆ ಲೋಕಾಯುಕ್ತ ಅಧಿಕಾರಿಯಿಂದ ಅಧಿಕೃತವಾಗಿ ಪ್ರಕಟಣೆ ನೀಡಲಾಗಿದೆ. ನಾಲ್ವರು ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ಒಟ್ಟು 12,59,10,860 ರೂ. ಮೌಲ್ಯದ ಆಸ್ತಿ-ಪಾಸ್ತಿ ಪತ್ತೆಯಾಗಿದೆ ಅಂತಾ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.