ಕಲಬುರಗಿ: ನ15 ರಂದು ಕನ್ನಡ ರಾಜ್ಯೋತ್ಸವ: ನಗರದಲ್ಲಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ಅಧ್ಯಕ್ಷ ಸಚೀನ್ ಪರತಬಾದ್
ಕಲಬುರಗಿ : ನವೆಂಬರ್ 15 ರಂದು ಸಂಜೆ 5 ಗಂಟೆಗೆ ಕಲಬುರಗಿ ನಗರದ ಕನ್ನಡ ಭವನದ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ಅಧ್ಯಕ್ಷ ಸಚೀನ್ ಪರತಬಾದ್ ಹೇಳಿದ್ದಾರೆ.. ನ11 ರಂದು ಮಧ್ಯಾನ 12 ಗಂಟೆಗೆ ನಗರದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ದಿವ್ಯಸಾನಿಧ್ಯವನ್ನ ಚಿತ್ತಾಪುರದ ಸೋಮಶೇಖರ್ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನ ಶಾಸಕ ಅಲ್ಲಮಪ್ರಭು ಪಾಟೀಲ್ ಉದ್ಘಾಟನೆ ಮಾಡಲಿದ್ದಾರೆಂದು ಸಚೀನ್ ಪರತಬಾದ್ ಹೇಳಿದ್ದಾರೆ