ನಂಜನಗೂಡು : ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡು ನಗರದ ನಂದಿ ಕನ್ವೆನ್ಷನ್ ಸಭಾಂಗಣದಲ್ಲಿ ಇಂದು ಶನಿವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೂ ಹೆಚ್ಚಿನ ಅನುಕೂಲವಾಗಿದೆ ಎಂದು ಹೇಳಿದರು.