ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ತಾಳ್ಮೆಯಿಂದ ಎದುರಿಸ ಬೇಕು ಎಂದು ಸಂಸದ ಮಲ್ಲೇಶ್ ಬಾಬು ಹೇಳಿದರು. ನಗರದ ಮಹಿಳಾ ಸಮಾಜ ಶಾಲಾ ಆವರಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಯಲ್ಲಿ ಆಯೋಜನೆ ಮಾಡಿದ್ದ ಜಿಲ್ಲಾ ಮಟ್ಟದ ಸ್ಕೌಟ್ಸ್ ಗೈಡ್ಸ್ ಧ್ವಜ ದಿನಾಚರಣೆಯಲ್ಲಿ ಧ್ವಜಗಳನ್ನು ಬಿಡುಗಡೆ ಮಾಡಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಉತ್ತಮ ಆಶಯಗಳನ್ನು ಹೊಂದಿದ್ದು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಈ ಶಿಕ್ಷಣ ಸಹಕಾರಿಯಾಗಿದೆ ಎಂದರು.