ಮಳವಳ್ಳಿ: ಡಿಸಿಎಂ ಡಿಕೆ ಶಿವಕುಮಾರ್ ಅಭಿವೃದ್ಧಿ ಕೆಲಸಗಳಿಗೆ ಸಿದ್ದರಾಮಯ್ಯ ಅವರು ಕೈಜೋಡಿಸುತ್ತಿದ್ದಾರೆ: ಶಿವನಸಮುದ್ರದಲ್ಲಿ ಸಚಿವ ಎನ್ ಚೆಲುವರಾಯಸ್ವಾಮಿ
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಅವರೊಂದಿಗೆ ಕೈಜೋಡಿಸಿ ರಾಜ್ಯದ ಜನಪರ ಅಭಿವೃದ್ದಿ ಕೆಲಸಗಳಲ್ಲಿ ಮತ್ತು ಯೋಜನೆಗಳಲ್ಲಿ ಶ್ರಮಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾಗಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು. ಮಳವಳ್ಳಿ ತಾಲ್ಲೂಕಿನ ಶಿವನ ಸಮುದ್ರದಲ್ಲಿ ಆಯೋಜಿಸಿದ್ದ ಜಲಪಾತೋತ್ಸವ ಕಾರ್ಯಕ್ರಮದಲ್ಲಿ ಅವರು ಭಾನುವಾರ ರಾತ್ರಿ 7 ಗಂಟೆಯಲ್ಲಿ ಮಾತನಾಡಿ, ಕೆ ಆರ್ ಎಸ್ ಅಣೆಕಟ್ಟೆಯನ್ನು ಹತ್ತಿರದಿಂದ ಗಮನಿಸಿ ಮತ್ತು ಅಚ್ಚುಕಟ್ಟು ಪ್ರದೇಶದ ಕಾಲುವೆಗಳನ್ನು ಅಭಿವೃದ್ದಿ ಪಡಿಸುವಲ್ಲಿ ಮುಂದಾಗಿದ್ದಾರೆ. ಬೆಂಗಳೂರನ್ನು ಡಿ.ಕೆ.ಶಿವಕುಮಾರ್ ದೂರದೃಷ್ಟಿ ಇಟ್ಟುಕೊಂಡು ಅಭಿವೃದ್ದಿ ಪಡಿಸಲು ಪ್ರಾರಂಭ ಮಾಡಿದ್ದಾರೆ ಎಂದರು.