ಹಾಸನ: ಶಿಕ್ಷಕರಿಗೆ ಟಿಇಟಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ನಗರದ ಜಿಲ್ಲಾಧಿಕಾರಿ ಕಚೇರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮಾನವಿ
Hassan, Hassan | Sep 20, 2025 ಹಾಸನ: ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಚೈತ್ರ ನಾಯಕರ ಹಳ್ಳಿ ಅವರು ಮಾತನಾಡಿ, ಸೆಪ್ಟೆಂಬರ್ 1 ರಿಂದ ಅನ್ವಯ ಆಗುವಂತೆ ಸುಪ್ರೀಂ ಕೋರ್ಟ್ ಎಲ್ಲಾ ಶಾಲಾ ಶಿಕ್ಷಕರಿಗೆ ಟಿಈಟಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ ಆದುದರಿಂದ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಿ ಇದನ್ನು ವಾಪಸ್ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸುತ್ತೇವೆ ಎಂದರು