ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಡಿ ಇದೇ ಡಿಸೆಂಬರ್ 21 ರಿಂದ 24 ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಐದು ವರ್ಷದೊಳಗಿನ 126361 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಇದೇ ಡಿಸೆಂಬರ್ 21 ರಿಂದ 24 ರವರೆಗೆ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು