ಆಳಂದ: ಭೂಸನೂರ ಗ್ರಾಮದಲ್ಲಿ ರೇಣುಕಾಚಾರ್ಯ ಜಾತ್ರೆಯ ಸಂಭ್ರಮ
ಆಳಂದ ತಾಲ್ಲೂಕಿನ ಭೂಸನೂರ ಗ್ರಾಮದಲ್ಲಿ ಜಗದ್ಗುರು ರೇಣುಕಾಚಾರ್ಯ ಸಂಸ್ಥಾನ ಹಿರೇಮಠದಲ್ಲಿ ರೇಚುಕಾಚಾರ್ಯ ಜಯಂತಿ ಅಂಗವಾಗಿ ಜಾತ್ರೆ ನಡೆಯಿತು.ಜಾತ್ರೆಯ ಅಂಗವಾಗಿ ಮಠದಲ್ಲಿ ಶುಕ್ರವಾರ ಬೆಳಿಗ್ಗೆ 11 ಘಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪಲ್ಲಕ್ಕಿ ಮೆರವಣಿಗೆ ಮಾಡಲಾಯಿತು.ಹಿರೇಮಠದ ಪೂಜ್ಯರಾದ ಗುರುಬಸವ ಶಿವಾಚಾರ್ಯರ,ಪೂಜ್ಯ ಬಸವಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸಿ ಭಕ್ತರಿಗೆ ಆರ್ಶಿವಚನ ನೀಡಿದರು.ಈ ಸಂದರ್ಭದಲ್ಲಿ ಭಕ್ತರು ಪಾಲ್ಗೊಂಡಿದ್ದರು.