ಗುಂಡ್ಲುಪೇಟೆ: ಪಟ್ಟಣದಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ರೈತರಿಂದ ಬೈಕ್ ರ್ಯಾಲಿ
ಕಾಡು ಪ್ರಾಣಿಗಳಿಂದ ಆದ ಬೆಳೆ ನಷ್ಟಕ್ಕೆ ವೈಜ್ಞಾನಿಕ ಬೆಲೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದಲ್ಲಿ ಬೈಕ್ ಮತ್ತು ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು. ಪಟ್ಟಣದ ಹೊರವಲಯದ ಕೆಬ್ಬೆಕಟ್ಟೆ ಶನೇಶ್ವರ ದೇವಾಲಯದಿಂದ ಹೊರಟ ರೈತರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ತಾಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ರೈತ ಮುಖಂಡ ಹೊನ್ನೂರು ಪ್ರಕಾಶ್ ಮಾತನಾಡಿ,ಪ್ರತಿ ವರ್ಷ ಕಾವೇರಿ ಕೊಳ್ಳದಿಂದ 70 ರಿಂದ 80 ಟಿಎಂ.ಸಿ ನೀರು ಸಮುದ್ರ ಸೇರುತ್ತಿದೆ ಎಂದರು.