ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ತೆರಿಗೆ ಸಂಗ್ರಹ ವಿಚಾರದಲ್ಲಿ ಮುತುವರ್ಜಿ ವಹಿಸಿರುವುದು ಶ್ಲಾಘನೀಯ ಎಂದು ಬಿಜೆಪಿ ಮುಖಂಡ ದೇವರಾಜ ಶಹಾಪೂರ ತಿಳಿಸಿದರು. ನಗರದಲ್ಲಿ ಬುಧವಾರ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಮಹಾಪೌರರು ತೆರಿಗೆ ಸಂಗ್ರಹ ವಿಚಾರದಲ್ಲಿ ಮುತುವರ್ಜಿ ವಹಿಸಿ ತೆರಿಗೆ ವಸೂಲು ಮಾಡಿದ್ದಾರೆ. ಈ ಹಣ ಹುಬ್ಬಳ್ಳಿ ಧಾರವಾಡ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು ಆಗ್ರಹಿಸಿದರು