ಹೆಬ್ರಿ: ಹೆಬ್ರಿ, ಕಾರ್ಕಳದಲ್ಲಿ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ, ಶಾಸಕ ಸುನಿಲ್ ಕುಮಾರ್ ಭಾಗಿ
Hebri, Udupi | Jun 23, 2025 ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳ ಮುಂದೆ ಬಿಜೆಪಿ ಧರಣಿ ಸತ್ಯಾಗ್ರಹ ಮಾಡಿದೆ. ಮಾಜಿ ಸಚಿವ , ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಹತ್ತಕ್ಕೂ ಹೆಚ್ಚು ಗ್ರಾಮ ಪಂಚಾಯತಿಗಳ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದರು. 9/11 ನಿವೇಶನಗಳ ಏಕವಿನ್ಯಾಸ ಸಮಸ್ಯೆ, ಅಕ್ರಮ ಸಕ್ರಮ ಅರ್ಜಿಗಳ ತಿರಸ್ಕಾರ, ಆಶ್ರಯ ಮನೆಗಳ ಬಿಡುಗಡೆ, ವೃದ್ಯಾಪ ವೇತನ,ಸಂಧ್ಯಾ ಸುರಕ್ಷಾ ಪಿಂಚಣಿ ರದ್ದತಿಗೆ ಪ್ರತಿಭಟನೆಯ ಸಂದರ್ಭದಲ್ಲಿ ಆಕ್ಷೇಪ ವ್ಯಕ್ತಪಡಿಸಿದರು. ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಸ್ಥಳೀಯ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.