ಶಿವಮೊಗ್ಗ: ₹140 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ: ಸೊರಬದಲ್ಲಿ ಸಚಿವ ಮಧು ಬಂಗಾರಪ್ಪ
ಮುಂದಿನ ಒಂದು ತಿಂಗಳಲ್ಲಿ ಸೊರಬ ತಾಲೂಕಿನಲ್ಲಿ 140 ಕೋಟಿ ರೂಪಾಯಿ ವೆಚ್ಚಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸೊರಬ ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುರಭಾ ತಾಲೂಕಿನ ವರದಾ ನದಿಗೆ ಬ್ಯಾರೇಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ 62 ಕೋಟಿ ರೂಪಾಯಿ ಮಂಜೂರಾಗಿದ್ದು ಶೀಘ್ರದಲ್ಲಿ ಕಾರ್ಯ ಆರಂಭಗೊಳ್ಳಲಿದೆ ಎಂದರು.