ಶಿರಸಿ: ಕೊಳಗಿಬೀಸ್ ಶ್ರೀ ಮಾರುತಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಸಂಸದ ಕಾಗೇರಿ ಚಾಲನೆ
ಶಿರಸಿ :ತಾಲೂಕಿನ ಕೊಳಗಿಬೀಸ್ನಲ್ಲಿರುವ ಶ್ರೀ ಮಾರುತಿ ದೇವಸ್ಥಾನದ ಆವರಣದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯ ಅಂಗವಾಗಿ, ಸ್ವಚ್ಛತಾ ಕಾರ್ಯಕ್ರಮವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಿಡ ನೆಡುವುದರ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಸಮುದಾಯದ ಪ್ರತಿಯೊಬ್ಬರೂ ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸ್ವಚ್ಛ, ಸುಂದರ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.