ಹೊಸನಗರ ತಾಲೂಕಿನ ಆನೆಗದ್ದೆ ಗ್ರಾಮದಲ್ಲಿ ದಿನಸಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ಎರಡು ಕಡೆ ದಿಢೀರ್ ದಾಳಿ ನಡೆಸಿ ರಿಪ್ಪನ್ ಪೇಟೆ ಠಾಣೆ ಪೊಲೀಸರು ಬುಧವಾರ ಸಂಜೆ 5 ಗಂಟೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮದ್ಯ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಸಬ್ ಇನ್ಸ್ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.