ಬೆಂಗಳೂರು ಉತ್ತರ: ಬೆಳಗಾವಿ ಹಣ ಪತ್ತೆ ಪ್ರಕರಣ; ಮಹಾರಾಷ್ಟ್ರ ಪೊಲೀಸರಿಗೆ ಪತ್ರ ಬರೆಯಲಾಗಿದೆ: ನಗರದಲ್ಲಿ ಪರಮೇಶ್ವರ್
ಗೃಹ ಸಚಿವ ಜಿ. ಪರಮೇಶ್ವರ್ ಅವರು ಬೆಳಗಾವಿಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಸಿ ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿ, . ಈ ವಿಚಾರದಲ್ಲಿ ಮಹಾರಾಷ್ಟ್ರ ಪೊಲೀಸರು ನಮ್ಮ ರಾಜ್ಯ ಪೊಲೀಸರಿಗೆ ಪತ್ರ ಬರೆದಿದ್ದು, ಹೆಚ್ಚಿನ ಮಾಹಿತಿಯನ್ನು ಕೇಳಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣ ಇನ್ನೂ ಪ್ರಾರಂಭಿಕ ಹಂತದಲ್ಲಿರುವುದರಿಂದ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಮಾಹಿತಿ ಸಿಕ್ಕ ಬಳಿಕ ಕಾನೂನು ಪ್ರಕಾರ ನಮ್ಮ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದರು. ತನಿಖೆಗೆ ಸರ್ಕಾರದ ಸಹಾಯ ಬೇಕೆಂದು ಮಹಾರಾಷ್ಟ್ರ ಪೊಲೀಸರು ಕೇಳಿರುವುದಾಗಿ ಹೇಳಿದರು.