ಕುಂದಗೋಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟು ಹಬ್ಬ: ಶಾಸಕ ಎಂ.ಆರ್.ಪಾಟೀಲ ಸ್ವಚ್ಛ ಭಾರತ ಪರಿಕಲ್ಪನೆ ಅಡಿಯಲ್ಲಿ ಸ್ವಚ್ಚತಾ ಅಭಿಯಾನ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಶಾಸಕ ಎಂ.ಆರ್ ಪಾಟೀಲ ಅವರು ಸ್ವಚ್ಛ ಭಾರತ ಪರಿಕಲ್ಪನೆ ಅಡಿಯಲ್ಲಿ ಸ್ವಚ್ಚತಾ ಅಭಿಯಾನ ನಡೆಸಿದರು. ಬುಧವಾರ ಬೆಳಗ್ಗೆ 11 ಗಂಟೆಗೆ ಕುಂದಗೋಳ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಸ್ವಚ್ಚತಾ ಅಭಿಯಾನ ನಡೆಸಿದರು. ತಾಲೂಕು ಆಸ್ಪತ್ರೆ ಆವರಣ ಸೇರಿದಂತೆ ವಿವಿಧ ಕಡೆಗಳಲ್ಲಿ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.