ಬೆಳಗಾವಿ: ನವೆಂಬರ್ ಒಂದರಂದು ಸುವರ್ಣ ವಿಧಾನಸೌಧದ ಎದುರು ಧರಣಿ ಸತ್ಯಾಗ್ರಹ: ನಗರದಲ್ಲಿ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಬಿ. ಡಿ. ಹಿರೇಮಠ
ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಸರಕಾರ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ಈ ಬೇಡಿಕೆ ಈಡೇರದಿದ್ದರೆ, ನವೆಂಬರ್ ಒಂದರಂದು ಸುವರ್ಣ ವಿಧಾನಸೌಧದ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಇಂದು ಶನಿವಾರ 1 ಗಂಟೆಗೆ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಬಿ. ಡಿ. ಹಿರೇಮಠ ಮಾತನಾಡಿದರು ಅಲ್ಲದೆ, ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಹಾಗೂ ಬೆಳಗಾವಿಯನ್ನು ಎರಡನೇ ರಾಜ್ಯ ರಾಜಧಾನಿಯನ್ನಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.