ಕುಶಾಲನಗರ: ಸುಂಟಿಕೊಪ್ಪದಲ್ಲಿ ಭೀಕರ ಅಪಘಾತ, ಬಸ್ ಡಿಕ್ಕಿಯಾಗಿ 7 ವರ್ಷದ ಬಾಲಕಿ ಸಾವು
ಸುಂಟಿಕೊಪ್ಪದ ಕೆಇಬಿ ಸಮೀಪ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಅಸ್ಸಾಂ ಮೂಲದ 7 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಅಂಗಡಿಯಿಂದ ಮನೆಗೆ ಮರಳುತ್ತಿದ್ದಾಗ ರಸ್ತೆ ದಾಟುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.