ಗುರ್ಲಾಪೂರ ಗ್ರಾಮದಲ್ಲಿ ಜಾನುವಾರುಗಳಿಗೆ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ನೀಡಿದರು. ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಲ್ಲಿ ಗುರುವಾರ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಜರುಗಿದ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು. ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸಬೇಕು ಮತ್ತು ಲಸಿಕಾ ಅಭಿಯಾನವು ಯಶಸ್ವಿಗೊಳಿಸಬೇಕು ಎಂದರು