ಹಳಿಯಾಳ: ಯಡೋಗಾದಲ್ಲಿರುವ ಸ.ಹಿ.ಪ್ರಾ ಶಾಲೆಗೆ ಕಳಪೆ ಗುಣಮಟ್ಟದ ಬಿಸಿಯೂಟ ಆಹಾರ ಪದಾರ್ಥಗಳ ಪೊರೈಕೆ, ಪಾಲಕರಿಂದ ಆಕ್ರೋಶ
ಹಳಿಯಾಳ : ತಾಲೂಕಿನ ಯಡೋಗಾದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಳಪೆ ಗುಣಮಟ್ಟದ ಬಿಸಿಯೂಟ ಆಹಾರ ಪದಾರ್ಥಗಳ ಪೂರೈಕೆಯಾಗುತ್ತಿರುವುದರ ಬಗ್ಗೆ ವಿದ್ಯಾರ್ಥಿಗಳ ಪಾಲಕರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಬಿಸಿಯೂಟಕ್ಕೆ ಪೂರೈಕೆಯಾಗುವ ಆಹಾರ ಪದಾರ್ಥಗಳು ಕಳಪೆ ಗುಣಮಟ್ಟದ್ದಾಗಿದ್ದು, ವಿದ್ಯಾರ್ಥಿಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಕೂಡಲೇ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳ ಪಾಲಕರು ಆಗ್ರಹಿಸಿದ್ದಾರೆ.