ಚಾಮರಾಜನಗರ: ಬದನಗುಪ್ಪೆ ಬಳಿ ಟೆಂಪೋ ಡಿಕ್ಕಿಯಾಗಿ ರಾಜಸ್ಥಾನದ ಕಾರ್ಮಿಕ ಸಾವು
ಟೆಂಪೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಬದನಗುಪ್ಪೆ ಬಳಿ ಮಂಗಳವಾರ ರಾತ್ರಿ ನಡೆದಿದೆ. ರಾಜಸ್ಥಾನ ಮೂಲದ ಕಿಶನ್ ಮೃತ ಬೈಕ್ ಸವಾರ. ಈತ ಗ್ರಾನೈಟ್ ಪ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು ಬೈಕ್ ನಲ್ಲಿ ತೆರಳುವಾಗ ಮೈಸೂರು ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಹಿನ್ನೆಲೆ ಸ್ಥಳದಲ್ಲೇ ಕಿಶನ್ ಅಸುನೀಗಿದ್ದಾನೆ. ಚಾಮರಾಜನಗರ ಟ್ರಾಫಿಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಎರಡು ವಾಹನಗಳನ್ನು ವಶಕ್ಕೆ ಪಡೆದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಮ್ಸ್ ಗೆ ರವಾನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.