ಧಾರವಾಡ: ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ
ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಹೆಚ್ಚಾಗುತ್ತಿದೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗಿಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ವಿನಯ್ ಕುಲಕರ್ಣಿ ಇದೀಗ ಮತ್ತೊಂದು ಹಿನ್ನಡೆ ಅನುಭವಿಸಿದ್ದಾರೆ. ವಿನಯ್ ಕುಲಕರ್ಣಿ ಮೇಲಿದ್ದ ಸಾಕ್ಷಿ ನಾಶ ಪ್ರಕರಣವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸಿಬಿಐ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್, ವಿನಯ್ ಕುಲಕರ್ಣಿ ಮೇಲಿನ ಸಾಕ್ಷಿ ನಾಶ ಪ್ರಕರಣ ಎತ್ತಿಹಿಡಿದೆ.