ಬೆಂಗಳೂರು ಉತ್ತರ: ಟನಲ್ ರಸ್ತೆ ಯೋಜನೆ- ಬಿಜೆಪಿ ವಿರೋಧ ರಾಜಕೀಯ ಪ್ರೇರಿತ: ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ ಕಂಠೀರವ ಸ್ಟೇಡಿಯಂ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಉಪಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದರು.