ಪುತ್ತೂರು: 2 ವರ್ಷದಿಂದ ತಲೆಮರೆಸಿಕೊಂಡಿದ್ದ ಅಕ್ರಮ ಮರಳು ಸಾಗಾಟದ ಆರೋಪಿ ಬಂಧನ
ಅಕ್ರಮ ಮರಳು ಸಾಗಾಟ ಪ್ರಕರಣದಲ್ಲಿ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಮೂಲದ ವಿಶ್ವ ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಈತನ ವಿರುದ್ಧ ವಾರಂಟ್ ಜಾರಿಯಾಗಿತ್ತು. ಇದೀಗ ಆರೋಪಿಯನ್ನು ಹಾಸನದಲ್ಲಿ ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.