ಶಿರಾ: ಬಂದಕುಂಟೆ ಗ್ರಾಮದಲ್ಲಿ ಪ್ರಜಾ ಸೇವಾ ಜನಸಭೆ, ಸ್ಥಳದಲ್ಲೇ ಪರಿಹಾರ
Sira, Tumakuru | Nov 15, 2026 ಶಿರಾ ತಾಲೂಕಿನ ಬಂದಕುಂಟೆ ಗ್ರಾಮದಲ್ಲಿ ನಡೆದ ಪ್ರಜಾ ಸೇವಾ ಜನಸಭೆಯಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ಗುಟೂರು ಶಿವಪ್ಪ ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಿದರು. ಸಾರ್ವಜನಿಕರ ಹಲವು ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗಿದ್ದು, ಉಳಿದ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.