ಬಾಗಲಕೋಟೆ:ಕರ್ನಾಟಕ ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮೇ 12 ರಂದು ಬೆಳಿಗ್ಗೆ 9.30 ಗಂಟೆಗೆ ನಾಗರಿಕ ಸುರಕ್ಷತಾ ಕುರಿತು ಮಾಕ್ ಡ್ರಿಲ್ ನಡೆಸಲಾಗುತ್ತಿದೆ ಎಂದು ಅಪರ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ತಿಳಿಸಿದರು. ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಂದು ಮಾಕ್ ಡ್ರೀಲ್ ನಡೆಸುವ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನಾಗರಿಕ ಸುರಕ್ಷತಾ ತಾಲೀಮು ನಡೆಸುವ ಮೂಲಕ ತುರ್ತು ಪರಿಸ್ಥಿತಿ ಎದುರಾದ ವೇಳೆ ಸಾರ್ವಜನಿಕರು ಹೇಗೆ ತಮ್ಮನ್ನು ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.