ಮಡಿಕೇರಿ: ದೇವಾಲಯಕ್ಕೆ ಪೂಜೆಗೆ ಬಂದಿದ್ದ ಕುಟುಂಬದ ಮೇಲೆ ಗುಂಪಿನಿಂದ ಹಲ್ಲೆ
ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯಕ್ಕೆ ಪೂಜೆಗೆ ಬಂದಿದ್ದ ಕುಟುಂಬದ ಮೇಲೆ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ. ಸಿಸಿಟಿವಿಯಲ್ಲಿ ದೃಶ್ಯ ದಾಖಲಾಗಿದ್ದು, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.