ಉಡುಪಿ: ಉಡುಪಿ, ಕಾರ್ಕಳ,ಧರ್ಮಸ್ಥಳ, ಸುಬ್ರಮಣ್ಯಕ್ಕೆ ರೈಲ್ವೆ ಸಂಪರ್ಕ ಒದಗಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ರೊಂದಿಗೆ ಶೀಘ್ರದಲ್ಲಿ ಮಾತುಕತೆ
Udupi, Udupi | Sep 21, 2025 ಉಡುಪಿ ಗೆ ಭೇಟಿ ನೀಡಿದ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ, ಇಂದ್ರಾಳಿ ರೈಲ್ವೆ ಓವರ್ ಬ್ರಿಡ್ಜ್ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಉಡುಪಿ, ಕಾರ್ಕಳ, ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ರೈಲ್ವೇ ಸಂಪರ್ಕ ಒದಗಿಸುವ ಬಗ್ಗೆ ಕೇಂದ್ರ ರೈಲ್ವೇ ಸಚಿವರೊಂದಿಗೆ ಶೀಘ್ರದಲ್ಲಿ ಮಾತುಕತೆ ನಡೆಸಲಾಗುವುದು ಎಂದರು. ಮಂಗಳೂರು ಹಾಗೂ ಕಾರವಾರ ಬಂದರು ಸದುಪಯೋಗ ಮಾಡಲು ರೈಲ್ವೇ ಇಲಾಖೆ ತನ್ನದೇ ಆದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೊಂಕಣ ರೈಲ್ವೆ ವಿಚಾರವಾಗಿ ಸುಧೀರ್ಘ ಚರ್ಚೆ ನಡೆಯುತ್ತಿದೆ, ಮುಂದಿನ ದಿನಗಳಲ್ಲಿ ಉತ್ತಮ ಯೋಜನೆ ಮೂಡಿ ಬರಲಿದೆ ಎಂದರು.